ಬೆಂಗಳೂರು :
ಶನಿವಾರದಿಂದ ಸುಮಾರು ನಾಲ್ಕೈದು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಅ.6ರಿಂದ ರಾಜ್ಯದಲ್ಲಿ ಆರಂಭವಾಗುವ ಮಳೆಯ ತೀವ್ರತೆ ಮಾಹಿತಿ ಲಭ್ಯವಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ತೀರದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಕೇಂದ್ರಕ್ಕೆ ಅತಿವೃಷ್ಟಿವರದಿ:
ವಿಶೇಷವಾಗಿ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಮತ್ತು ಅನಾವೃಷ್ಟಿ ಎರಡೂ ಉಂಟಾಗಿದೆ. ಈಗಾಗಲೇ ಅನಾವೃಷ್ಟಿ ಉಂಟಾಗಿರುವ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವರದಿಯನ್ನು ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ಸಿದ್ಧಪಡಿಸಲಾಗಿದೆ. ಅನಾವೃಷ್ಟಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಲಿದೆ ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
