ನವದೆಹಲಿ:
ಮಾಜಿ ಕ್ರೆಕೆಟಿಗ ಗೌತಮ್ ಗಂಭೀರ್ ಅವರನ್ನು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿಯು ಸೋಮವಾರ ರಾತ್ರಿ ಘೋಷಿಸಿದೆ.
ದೆಹಲಿಯ 7 ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತು. ಮಾಜಿ ಕ್ರಿಕೆಟಿಕ ಗೌತಮ್ ಗಂಭೀರ್ ಅವರು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.
#Delhi: BJP MP candidate from East Delhi, Gautam Gambhir holds roadshow ahead of filling his nomination, says, "I really want to contribute something to the country & whatever our PM has done in the last 5 years, I want to take that legacy forward." pic.twitter.com/eiGz9mcLCd
— ANI (@ANI) April 23, 2019
ಇಂದು (ಮಂಗಳವಾರ) ಭರ್ಜರಿ ರೋಡ್ ಶೋ ನಡೆಸಿದ ಗೌತಮ್ ಗಂಭೀರ್ ನಾಮಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.
ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್ ಗಂಭೀರ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿತ್ತು. ಆದರೆ, ಯಾವ ಕ್ಷೇತ್ರ ಎಂಬುದು ಸ್ಪಷ್ಟವಾಗಿರಲಿಲ್ಲ. ಈಗ ಈ ಕುತೂಹಲಕ್ಕೆ ತೆರಬಿದ್ದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
