ಠಾಣೆ:
ಕಿಕ್ಕಿರಿದು ತುಂಬಿದ್ದ ಚಲಿಸುತ್ತಿದ್ದ ಟ್ರೈನ್ನಿಂದ ನಿಯಂತ್ರಣ ತಪ್ಪಿ 22 ವರ್ಷದ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ.
ಚಾರ್ಮಿ ಪ್ರಸಾದ್ (22) ಮೃತಪಟ್ಟ ಯುವತಿ. ಚಾರ್ಮಿ ಕಲ್ಯಾಣನಿಂದ ಛತ್ರಪತಿ ಶಿವಾಜಿ ಟರ್ಮಿನಲ್‍ಗೆ ಹೋಗಲು 8.53ಗೆ ರೈಲು ಹತ್ತಿದ್ದರು. ರೈಲಿನಲ್ಲಿ ಹೆಚ್ಚಿನ ಜನಸಂದಣಿ ಇದ್ದ ಕಾರಣ ಆಕೆ ಗೇಟ್ ಬಳಿ ನಿಂತು ಪ್ರಯಾಣಿಸುತ್ತಿದ್ದರು.
ಈ ವೇಳೆ ತನ್ನ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾಳೆ. ತಕ್ಷಣವೇ ಆಕೆಯನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ