‘ಎಷ್ಟೇ ವಿರೋಧವಿದ್ದರೂ ಪೌರತ್ವ ಕಾಯ್ದೆ ಹಿಂಪಡೆಯಲ್ಲ’ – ಅಮಿತ್ ಶಾ

ಜೋಧಪುರ: 

      ಎಷ್ಟೇ ವಿರೋಧವಿದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಮಾತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತಲ್​ ಶಾ ಸ್ಪಷ್ಟಪಡಿಸಿದ್ದಾರೆ.

     ಇಂದು ರಾಜಸ್ಥಾನದ ಜೋಧಪುರದಲ್ಲಿ ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪ ಸಂಖ್ಯಾತರ ವಿರುದ್ಧವಲ್ಲ ಮತ್ತು ಇದನ್ನು ಹಿಂಪಡೆಯುವ ಮಾತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತಲ್​ ಶಾ ಸ್ಪಷ್ಟಪಡಿಸಿದ್ದಾರೆ.

     ಕಾಂಗ್ರೆಸ್‌ ಮತ್ತು ಇತರ ಪಕ್ಷಗಳು ಕಾಯ್ದೆ ಬಗ್ಗೆ ದೇಶದಲ್ಲಿ ಅಪಪ್ರಚಾರ ಮಾಡುತ್ತಿದೆ. ಯುವ ಜನತೆ ಇದರಿಂದ ದಾರಿ ತಪ್ಪುತ್ತಿದ್ದಾರೆ. ಆದರೂ ಪರವಾಗಿಲ್ಲ. ಎಷ್ಟು ಸುಳ್ಳನ್ನು ಅವರು ಹರಡುತ್ತಾರೆ. ಅಷ್ಟು ನಾವು ಹೆಚ್ಚು ಕೆಲಸ ಮಾಡಿ. ಅಲ್ಪಸಂಖ್ಯಾತರು ಮತ್ತು ಯುವಜನತೆಗೆ ತಲುಪಿಸುತ್ತೇವೆ ಎಂದರು.

      ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ 2015ಕ್ಕೂ ಮುನ್ನ ನೆರೆಯ ಮೂರು ರಾಷ್ಟ್ರಗಳಿಂದ ಮುಸ್ಲಿಮೇತರರು ಭಾರತಕ್ಕೆ ಬಂದಿದ್ದರೆ ಅವರಿಗೆ ಪೌರತ್ವ ನೀಡಲು ಈ ತಿದ್ದುಪಡಿ ಕಾಯ್ದೆ ಅನುಮತಿ ನೀಡುತ್ತದೆ. ಪೌರತ್ವ ಕಾಯ್ದೆ ದೇಶದ ಯಾವೊಬ್ಬ ನಾಗರಿಕರ ಪೌರತ್ವವನ್ನೂ ಕಸಿಯುವುದಿಲ್ಲ. ಬದಲಾಗಿ ಪೌರತ್ವ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link