ಜಾರ್ಖಂಡ್ :
ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಜಾರ್ಖಂಡ್ನ ಪಕೂರ್ನಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ಹೊರಹಾಕಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅದ್ಧೂರಿ ರಾಮಮಂದಿರ ದೇಗುಲ ನಿರ್ಮಾಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ, ಬಾಬ್ರಿ ಮಸೀದಿ ನಿರ್ಮಾಣಕ್ಕೂ ಜಾಗ ನೀಡುವ ಬಗ್ಗೆ ಮಹತ್ವದ ಆದೇಶವನ್ನು ನೀಡಿತ್ತು. ಈ ತೀರ್ಪಿನಿಂದಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
