ಪುಲ್ವಾಮ : ಮತಗಟ್ಟೆ ಮೇಲೆ ಗ್ರೆನೇಡ್ ದಾಳಿ!!!

ನವದೆಹಲಿ: 

     ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ ನಡೆದಿದೆ.

      ಅನಂತ್‌ನಾಗ್ ಕ್ಷೇತ್ರದ ರಾಹ್‌ಮೂ ಎಂಬಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್, ಯಾರಿಗೂ ಹಾನಿಯಾಗಿಲ್ಲ  ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. 

      ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿವೆ. ಜಮ್ಮು-ಕಾಶ್ಮೀರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ನಡೆದ ಮೊದಲ ಭಯೋತ್ಪಾದಕ ದಾಳಿ ಇದಾಗಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap