ನವದೆಹಲಿ:
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ ನಡೆದಿದೆ.
ಅನಂತ್‌ನಾಗ್ ಕ್ಷೇತ್ರದ ರಾಹ್‌ಮೂ ಎಂಬಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್, ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿವೆ. ಜಮ್ಮು-ಕಾಶ್ಮೀರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ನಡೆದ ಮೊದಲ ಭಯೋತ್ಪಾದಕ ದಾಳಿ ಇದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
