ಮುಂಬೈ:
73 ಕೋಟಿ ರೂ. ಮೌಲ್ಯದ ಅಂತರ್ಜಲ ಕಳ್ಳತನದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ವ್ಯಕ್ತಿಯೊಬ್ಬ ಅಕ್ರಮವಾಗಿ ಬಾವಿ ತೋಡಿ ಸುಮಾರು 73 ಕೋಟಿ ರೂಪಾಯಿ ಮೌಲ್ಯದ ನೀರನ್ನು ಟ್ಯಾಂಕರ್ ಮೂಲಕ ಮಾರಾಟ ಮಾಡಿದ್ದಾನೆಂದು ಹೇಳಲಾಗಿದ್ದು, ಈ ಸಂಬಂಧ ಕಳ್ಳತನ ಆರೋಪದಡಿಯಲ್ಲಿ ಕಾಲಬಾದೇವಿಯಲ್ಲಿರುವ ಬೋಮಾನಜಿ ಮಾಸ್ಟರ್ ಲೈನ್, ಪಾಂಡ್ಯ ಮೇಂಶನ್ ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮಾಲೀಕ ತ್ರಿಪುರ ಪ್ರಸಾದ್ ಪಾಂಡ್ಯಾ ತಮ್ಮ ಬಂಗಲೆಯ ಆವರಣದೊಳಗೆ ಪರವಾನಗಿ ಪಡೆಯದೇ ಅಕ್ರಮವಾಗಿ ಬಾವಿಗಳನ್ನು ತೋಡಿ ಟ್ಯಾಂಕರ್ ಮೂಲಕ ನೀರು ಮಾರಾಟ ಮಾಡುತ್ತಿದ್ದರು. 2006ರಿಂದ 2017ರ ನಡುವೆ ಒಟ್ಟು 6.10 ಲಕ್ಷ ಲೀ. ಟ್ಯಾಂಕರ್ ನೀರು ಮಾರಿದ್ದಾರೆ ಎಂದು ಎಫ್‍ಐಆರ್ ದಾಖಲಾಗಿದ್ದು, ಬಾವಿಗಳಿಗೆ ಪಂಪ್ ಅಳವಡಿಸಲು ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ ಪಡೆದಿದ್ದರು ಎಂದು ಆರೋಪಿಸಿ ಸುರೇಶ್ ಕುಮಾರ್ ಧೋಕಾ ಎಂಬುವವರು ದೂರು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
