ಅಹಮದಾಬಾದ್ :
ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಗುರುವಾರ (ಅಕ್ಟೋಬರ್ 29, 2020) ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಕೇಶುಭಾಯಿ (92) ಅವರು ಬಿಜೆಪಿಯ ಹಿರಿಯ ಮುಖಂಡರಾಗಿದ್ದು, ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
Keshubhai Patel, Former Chief Minister of Gujarat, passes away at the age of 92. He was admitted at a hospital in Ahmedabad. (File pic) pic.twitter.com/RZu4cMmLDp
— ANI (@ANI) October 29, 2020
ಕೇಶುಭಾಯಿ ಪಟೇಲ್ ಅವರು ಗುರುವಾರ ಬೆಳಗ್ಗೆ ಉಸಿರಾಡಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರು ಆಸ್ಪತ್ರೆಯಲ್ಲಿ ನಿಧನಹೊಂದಿರುವುದಾಗಿ ವರದಿ ತಿಳಿಸಿದೆ.
ಕೇಶುಭಾಯ್ ಪಟೇಲ್ ಅವರಿಗೆ ಕಳೆದ ಸೆಪ್ಟೆಂಬರ್ನಲ್ಲಿ ಕರೊನಾ ಪಾಸಿಟಿವ್ ಆಗಿತ್ತು. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Keshubhai-patel.jpg)