ಉತ್ತರ ಪ್ರದೇಶ :
ಟ್ರಕ್ ಗೆ ಡಿಕ್ಕಿಹೊಡೆದ ವ್ಯಾನ್ ಗೆ ಬೆಂಕಿ ತಗುಲಿ 7 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಅಗ್ರಾ -ಲಖ್ನೋ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ.
ಉನ್ನಾವೋ ಟೋಲ್ ಪ್ಲಾಜಾ ಸಮೀಪ ವ್ಯಾನ್ ನ ಟೈರ್ ಸ್ಫೋಟಗೊಂಡು ಮತ್ತೊಂದು ಬದಿಯಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ಎಲ್ಲ 7 ಮಂದಿ ಸಜೀವ ದಹನವಾಗಿದ್ದಾರೆ.
ವೇಗವಾಗಿ ಬಂದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ಹೇಳಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಎಲ್ಲ ರೀತಿಯ ಸಹಾಯ ಮತ್ತು ಪರಿಹಾರ ನೀಡುವಂತೆ ಉನ್ನಾವೊ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/02/Van-fire.gif)