ಹಾಸನ:
ಬಹುವರ್ಷಗಳಿಂದ ದೇವೇಗೌಡರ ಕುಟುಂಬದಲ್ಲಿ ನಡೆಯುತ್ತಿದ್ದ ಮೊಮ್ಮಕ್ಕಳ ರಾಜಕೀಯ ಪ್ರವೇಶ ವಿಚಾರಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿದೆ. ನಿರೀಕ್ಷೆಯಂತೆ ದೇವೇಗೌಡರ ಮೊಮ್ಮಗ ಹಾಗೂ ಸಚಿವ ರೇವಣ್ಣ ಅವರ ಮಗ ಪ್ರಜ್ವಲ್ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಇಂದು ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವನ್ನು ಪಕ್ಷದ ವರಿಷ್ಠ ದೇವೇಗೌಡರು ಅಂತಿಮಗೊಳಿಸಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ.
ತಮ್ಮ ಮೊಮ್ಮಗನಿಗೆ ರಾಜಕೀಯ ಪ್ರವೇಶಕ್ಕೆ ವೇದಿಕೆ ಕಲ್ಪಿಸಿಕೊಡುವ ಸಲುವಾಗಿಯೇ ಇಂದು ಸಮಾವೇಶ ಆಯೋಜಿಸಲಾಗಿತ್ತು. ನನ್ನ ಉತ್ತರಾಧಿಕಾರಿ ಪ್ರಜ್ವಲ್ ರೇವಣ್ಣ ಎಂದು ದೇವೇಗೌಡರು ಈ ಹಿಂದೆಯೇ ಘೋಷಿಸಿದ್ದರು. ಅದರಂತೆ ಮೊಮ್ಮಗನ ರಾಜಕೀಯ ಪ್ರವೇಶಕ್ಕೆ ಈಗಿನಿಂದಲೇ ಗೌಡರು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ