ಬೆಂಗಳೂರು:
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಗೋವಾ ರೆಸಾರ್ಟ್ ನಲ್ಲಿ ತಮ್ಮ 60ನೇ ಹುಟ್ಟು ಹಬ್ಬವನ್ನು ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ.
ಉಪ ಚುನಾವಣೆ ಬಳಿಕ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ ಶನಿವಾರವೇ ಕುಟುಂಬ ಸದಸ್ಯರೊಂದಿಗೆ ಗೋವಾಕ್ಕೆ ತೆರಳಿದ್ದರು. ಅಲ್ಲಿ ಶಾಸಕಿ ಹಾಗೂ ತಮ್ಮ ಪತ್ನಿ ಅನಿತಾಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕೇಕ್ ಕತ್ತರಿಸಿ ಇಂದು ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂಭ್ರಮದಲ್ಲಿ ಎಚ್ ಡಿಕೆ ಸ್ನೇಹಿತರು ಹಾಗೂ ಕುಟುಂಬ ವರ್ಗದವರು ಮಾತ್ರ ಭಾಗಿಯಾಗಿದ್ದರು.
ನಾಳೆ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗುವ ಕಾರ್ಯಕ್ರಮವಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ನಂತರ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಿ, ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
