ಬೆಂಗಳೂರು :
ದ್ವಿಚಕ್ರ ವಾಹನ ಸವಾರರ ಜೊತೆ ಅವರ ಹಿಂಬದಿ ಕುಳಿತಿರುವವರೂ ಕೂಡಾ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಿದೆ.
ಹೌದು, ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರರು ( ಹಿಂಬದಿ ಸವಾರ ಸೇರಿದಂತೆ) ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ.
ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದೂ ಸಹಾ ಆದೇಶದಲ್ಲಿ ತಿಳಿಸಲಾಗಿದೆ.
2019ರಲ್ಲಿ 1.51 ಲಕ್ಷ ರಸ್ತೆ ಅಪಘಾತ ಗಳಲ್ಲಿ ಶೇ.36ರಷ್ಟು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ. ಈ ಪೈಕಿ ಶೇ.29ರಷ್ಟು ಮಂದಿ ಹೆಲ್ಮೆಟ್ ಧರಿಸದ ಕಾರಣ ಮೃತಪಟ್ಟಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾಗಿದ್ದರೂ, ಇದೀಗ ಸಂಚಾರ ನಿಯಮ ವನ್ನು ಸಡಿಲಿಸಲು ನಿರ್ಧರಿಸಿದೆ. ಕಾನೂನು ಮತ್ತು ಅದರ ನಂತರ ಶಿಕ್ಷೆಯನ್ನು ಇನ್ನಷ್ಟು ಕಠಿಣಗೊಳಿಸುವ ಮೂಲಕ ಅವರು ಈ ರೀತಿ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ