ಹಾಸನ :
ಚುನಾವಣಾ ಆಯೋಗಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಸುಳ್ಳು ಪ್ರಮಾಣ ಪತ್ರ ನೀಡಿದ್ದಾರೆ ಎನ್ನಲಾದ ಪ್ರಕರಣವನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ, ಪ್ರಕರಣ ಕುರಿತು ಹೈಕೋರ್ಟ್ ನಲ್ಲಿ ಅಫಿಡೆವಿಟ್ ಹಾಕಿಲ್ಲ ಎಂದು ತಾಂತ್ರಿಕ ಕಾರಣದಿಂದ ಪ್ರಕರಣವನ್ನು ವಜಾಗೊಳಿಸಿದೆ.
ಕಳೆದ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ವಕೀಲ ದೇವರಾಜೇಗೌಡ ಅವರು ಹೈ ಕೋರ್ಟ್ನಲ್ಲಿ ಕೇಸ್ ಹಾಕಿದ್ದರು. ಈ ಸಂಬಂಧ ಹೈ ಕೋರ್ಟ್ ಪ್ರಜ್ವಲ್ ರೇವಣ್ಣಗೆ ನೊಟೀಸ್ ನೀಡಿತ್ತು. ಆದರೆ ಮೂರು ಬಾರಿಯೂ ಪ್ರಜ್ವಲ್ ರೇವಣ್ಣಗೆ ನೊಟೀಸ್ ತಲುಪಿರಲಿಲ್ಲ. ಆಫಿಡವಿಟ್ನಲ್ಲಿನ ವಿಳಾಸದಲ್ಲಿ ಅವರಿಲ್ಲವೆಂಬ ಉತ್ತರ ಕೇಳಿ ಬಂದಿತ್ತು. ಈಗ ಹೈಕೋರ್ಟ್ ತಾಂತ್ರಿಕ ಕಾರಣ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ