ಹುಬ್ಬಳ್ಳಿ:
ಹಾಸ್ಟೆಲ್ ವಾರ್ಡ್ನಿಂದ ಹಲ್ಲೆಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ಕನೇ ತರಗತಿ ಪುಟ್ಟ ಬಾಲಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮೃತ್ಯಂಜಯ ಹಿರೇಮಠ್ ಎಂಬುವರ ಮಗ ನಾದವಿಜಯ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ. ಮೂರು ತಿಂಗಳ ಹಿಂದೆ ನಾದವಿಜಯನನ್ನು ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿರುವ ‘ಛಾತ್ರಾಲಯ ವಸತಿ’ ನಿಲಯಕ್ಕೆ ಸೇರಿಸಲಾಗಿತ್ತು.
ವಿಜಯ ಹಾಸಿಗೆಯಲ್ಲಿ ಮೂತ್ರ ಮಾಡಿಕೊಂಡಿದ್ದಾನೆಂದು ವಾರ್ಡನ್ ಅವನ ಹೊಟ್ಟೆಗೆ ಒದ್ದು ಮನಬಂದಂತೆ ಥಳಿಸಿದ್ದಾರೆ . ಇದರಿಂದ ಬಾಲಕನಿಗೆ ಗಂಭೀರ ಗಾಯವಾಗಿತ್ತು. ಮತ್ತು ಹೊಟ್ಟೆಯಲ್ಲಿ ಬಾವು ಕಾಣಿಸಿಕೊಂಡಿದೆ ನಂತರ ಬಾಲಕ ಒಂದೂವರೆ ತಿಂಗಳು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಹುಡುಗನನ್ನು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೊದಲು ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶಸ್ತ್ರಚಿಕಿತ್ಸೆಗೂ ಮುನ್ನವೇ ಭಾನುವಾರ ಆಸ್ಪತ್ರೆಯಲ್ಲೆ ಮೃತಪಟ್ಟಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ