ಪಶುವೈದ್ಯೆ ಅತ್ಯಾಚಾರ ಪ್ರಕರಣ : ಅತ್ಯಾಚಾರವೆಸಗಿದ್ದ ಸ್ಥಳದಲ್ಲೇ ಹಂತಕರು ಎನ್’ಕೌಂಟರ್!!!

ಹೈದರಾಬಾದ್:

      ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ನಡೆಸಲಾಗಿದೆ.

      ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎನ್ ಕೌಂಟರ್‌ನಲ್ಲಿ ಮೃತಪಟ್ಟ ಆರೋಪಿಗಳು. ಕರ್ನಾಟಕದ ಹುಬ್ಬಳ್ಳಿ ಮೂಲದ ವಿಶ್ವನಾಥ ಸಜ್ಜನರ ನೇತೃತ್ವದ ತಂಡದಿಂದ ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ನಡೆಸಲಾಗಿದೆ.

      ಕೆಲ ದಿನಗಳ ಹಿಂದಷ್ಟೇ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ಆರೋಪಿಗಳು, ನಂತರ ಸೀಮೆಎಣ್ಣೆ ಹಾಕಿ ಸುಟ್ಟುಹಾಕಿದ್ದರು. ಪ್ರಕರಣದ ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿತ್ತು.

    ನ್ಯಾಯಾಲಯ ಏಳು ದಿನಗಳ ಕಾಲ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿತ್ತು.  ನ್ಯಾಯಾಂಗ ಬಂಧನಲ್ಲಿದ್ದ ಆರೋಪಿಗಳನ್ನು ಪೊಲೀಸರು ಗುರವಾರ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಸತತ ವಿಚಾರಣೆ ಬಳಿಕ ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಆಗ ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

      ಶುಕ್ರವಾರ ಮುಂಜಾನೆ 3.30ರ ಸುಮಾರಿನಲ್ಲಿ ಹೈದರಾಬಾದ್ ಹೊರವಲಯದ ಚಟಾನ್‌ಪಲ್ಲಿ ಬ್ರಿಡ್ಜ್ ಬಳಿ ನಡೆದ ಎನ್‌ ಕೌಂಟರ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳು ಮೃತಪಟ್ಟಿದ್ದಾರೆ.

      ಸೈಬರಾಬಾದ್ ಪೊಲೀಸ್ ಆಯುಕ್ತರಾದ ವಿಶ್ವನಾಥ ಸಜ್ಜನರ ನೇತೃತ್ವದ ತಂಡದಿಂದ ಎನ್ ಕೌಂಟರ್ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ