ಇಸ್ಲಾಮಾಬಾದ್ :
“ಒಂದೊಮ್ಮೆ ಭಾರತ ದಾಳಿ ನಡೆಸಿದರೆ ಪಾಕಿಸ್ತಾನ ಕೈಕಟ್ಟಿ ಕೂರುವುದಿಲ್ಲ. ಭಾರತದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ,” ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ದಾಳಿಗೆ ಪ್ರತಿ ದಾಳಿ ನಡೆಸುವ ಸೂಚನೆ ನೀಡಿದ್ದಾರೆ.
ಪುಲ್ವಾಮಾ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಭಾರತ ಆರೋಪಿಸಿದ ಹಿನ್ನೆಲೆಯಲ್ಲಿ ಆರೋಪವನ್ನು ತಿರಸ್ಕರಿಸಿರುವ ಇಮ್ರಾನ್ ಖಾನ್, “ಭಾರತ ಯಾವುದೇ ಸಾಕ್ಷ್ಯವಿಲ್ಲದೆ ಪಾಕಿಸ್ತಾನದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದೆ. ದಾಳಿಯಲ್ಲಿ ನಾವು ಭಾಗಿಯಾಗಿರುವ ಸಾಕ್ಷ ನೀಡಿದರೆ ತಕ್ಷಣವೇ ಕ್ರಮ ಜರಗಿಸಿ, ತನಿಖೆ ಆರಂಭಿಸುತ್ತೇವೆ. ದಾಳಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಅವರು ಆಶ್ವಾಸನೆ ನೀಡಿದ್ದಾರೆ.
ಸಮಸ್ಯೆಗಳನ್ನು ಬಗೆಹರಿಸಲು ಅಹಿಂಸೆ ಮಾರ್ಗವಲ್ಲ. ಮಾತುಕತೆ ಮೂಲಕ ಎಲ್ಲದಕ್ಕೂ ನಾವು ಪರಿಹಾರ ಕಂಡುಕೊಳ್ಳಬಹುದು ಎಂದಿರುವ ಪಾಕ್ ಪ್ರಧಾನಿ, “ಒಂದೊಮ್ಮೆ ಭಾರತ ದಾಳಿ ನಡೆಸಿದರೆ ಪಾಕಿಸ್ತಾನ ಕೈಕಟ್ಟಿ ಕೂರುವುದಿಲ್ಲ. ಭಾರತದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ,” ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
