ಇಲಿ ಎಸೆದವನ ಹತ್ಯೆ ….!!!

ನವದೆಹಲಿ:

ಸತ್ತ ಇಲಿಯನ್ನು ನೆರೆಮನೆಗೆ ಎಸೆದಿದ್ದಕ್ಕೆ ಕೋಪಗೊಂಡ ವ್ಯಕ್ತಿ ಎಸೆದವನನ್ನು ಹತ್ಯೆಗೈದಿದ್ದಾನೆ. ನೆರೆಮನೆಯಾತ ಕಬ್ಬಿಣದ ರಾಡ್​ನಲ್ಲಿ ಹೊಡೆದ ಪರಿಣಾಮ ಆತ ಗಂಭೀರ ಗಾಯಗೊಂಡಿದಾನೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಆಸ್ಪತ್ರೆಯವರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
40 ವರ್ಷದ ವ್ಯಕ್ತಿಗೆ ಆತನ ನೆರೆಮನೆಯವನೇ ರಾಡ್​ನಿಂದ ಹೊಡೆದಿದ್ದ. ಸತ್ತ ಇಲಿಯನ್ನು ತಮ್ಮ ಮನೆಯ ಬಳಿ ಎಸೆದಿದ್ದಕ್ಕೆ ಕೋಪಗೊಂಡಿದ್ದ ಎನ್ನಲಾಗಿದೆ. 

ಮೃತದೇಹವನ್ನು ಪೋಸ್ಟ್​ ಮಾರ್ಟ್ಂಗೆ ಕಳಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link