ಜೈಪುರ:
ಸೋಮವಾರ ತಡರಾತ್ರಿ ರಾಜಸ್ಥಾನದಲ್ಲಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ಬಿಎಸ್ಪಿಯ ಎಲ್ಲಾ 6 ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬಿಎಸ್ಪಿ ನಾಯಕ ಜೋಂಗಿದಾರ್ ಅವನಾ ಸೇರಿದಂತೆ ಎಲ್ಲ ಶಾಸಕರು ಬಿಎಸ್ಪಿ ತೊರೆದು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿದ್ದಾರೆ. ಶಾಸಕರು ತಮ್ಮ ವಿಲೀನ ಪತ್ರವನ್ನು ವಿಧಾನಸಭೆಯ ಸ್ಪೀಕರ್ ಡಾ.ಸಿ.ಪಿ ಜೋಶಿ ಅವರಿಗೆ ಸಲ್ಲಿಸಿದರು.
ಎಲ್ಲಾ ಬಿಎಸ್ಪಿ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿರುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಿಳಿಸಿದ್ದಾರೆ.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 100 ಸ್ಥಾನಗಳಲ್ಲಿ ಜಯಶಾಲಿಯಾಗಿತ್ತು. ಪಕ್ಷೇತರರು ಹಾಗು ಬಿಎಸ್ಪಿ ಶಾಸಕರ ಬೆಂಬಲದಿಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಇದೀಗ ಬಿಎಸ್ಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಇದರಿಂದಾಗಿ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಸಂಪೂರ್ಣ ಬಹುಮತ ದೊರೆತಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ