ನವದೆಹಲಿ:
ದೇಶದಲ್ಲಿ 354 ಜನರಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಸೋಂಕು (ಕೋವಿಡ್-19) ತಗುಲಿರುವುದು ದೃಢಪಟ್ಟಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 354 ಎಂದು ತಿಳಿಸಿದೆ.
ಇನ್ನು ಒಟ್ಟು ಸೋಂಕಿತರ ಸಂಖ್ಯೆ 4,421ಕ್ಕೇರಿದ್ದು, ಸೋಂಕಿತರ ಪೈಕಿ 366 ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 114 ಜನ ಮೃತಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ