ನವದೆಹಲಿ :
ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ಭಾರೀ ಗಂಡಾಂತರಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, 24 ತಾಸುಗಳ ಅವಧಿಯಲ್ಲಿ 384 ರೋಗಿಗಳು ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದು,ಕಳೆದ 24 ತಾಸುಗಳ ಅವಧಿಯಲ್ಲಿ ಆಘಾತಕಾರಿ ಮಟ್ಟದಲ್ಲಿ ಹೊಸ ದಾಖಲೆ ಮಟ್ಟದಲ್ಲಿ ಅಂದರೆ 18,552 ಸೋಂಕು ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 18,552 ಕೇಸ್ಗಳು ಪತ್ತೆಯಾಗಿದ್ದು, 384 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,08,953ಕ್ಕೆ ಹಾಗೂ ಮೃತರ ಸಂಖ್ಯೆ 15,685ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ