ನವದೆಹಲಿ:
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,522 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದ್ದು, ದೇಶದಲ್ಲಿ ಒಂದೇ ದಿನ 18,522 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 418 ಮಂದಿ ಸಾವನ್ನಪ್ಪಿದ್ದಾರೆ.
418 deaths and 18,522 new #COVID19 cases in the last 24 hours; Positive cases in India stand at 5,66,840 including 2,15,125 active cases,3,34,822 cured/discharged/migrated & 16,893 deaths: Ministry of Health & Family Welfare pic.twitter.com/7tw1fTBYxz
— ANI (@ANI) June 30, 2020
ಇನ್ನು ದೇಶದಲ್ಲಿ ಈವರೆಗೆ ಮಾರಣಾಂತಿಕ ಸೋಂಕಿಗೆ ತುತ್ತಾದವರ ಸಂಖ್ಯೆ 5,66,840ಕ್ಕೆ ಏರಿಕೆಯಾಗಿದೆ. ಈ ಪೈಕಿ 3,34,822 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, 2,15,125 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 16,893 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ