ನವದೆಹಲಿ:
ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 19,459 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
#CoronaVirusUpdates: #COVID19 India Tracker
(As on 29th June, 2020, 08:00 AM)▶️ Confirmed cases: 548,318
▶️ Active cases: 210,120
▶️ Cured/Discharged/Migrated: 321,723
▶️ Deaths: 16,475#IndiaFightsCorona#StayHome #StaySafe @ICMRDELHIVia @MoHFW_INDIA pic.twitter.com/jjalosD9hZ
— #IndiaFightsCorona (@COVIDNewsByMIB) June 29, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 19,459 ಸೋಂಕಿತರು ಪತ್ತೆಯಾಗಿದ್ದು, 380 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,48,318ಕ್ಕೆ ಹಾಗೂ ಮೃತರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈವರೆಗೆ ಒಟ್ಟು 5,48,318 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 16,475ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಚೇತರಿಕೆಯ ಪ್ರಮಾಣದಲ್ಲಿ ಕೂಡ ಗಣನೀಯ ಏರಿಕೆ ಕಂಡು ಬಂದಿದ್ದು, ಶೇ.58.67 ರಷ್ಟು ಅಂದರೆ 3,21,723 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,10,120 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
