ದೇಶದಲ್ಲಿ 24 ಗಂಟೆಯಲ್ಲಿ 2 ಸಾವಿರಕ್ಕೇರಿದ ಸಾವಿನ ಸಂಖ್ಯೆ!!

ನವದೆಹಲಿ :

      ದೇಶದಲ್ಲಿ ಒಂದೇ ದಿನ ಕೋವಿಡ್-19 ಸೋಂಕಿತರ ಸಂಖ್ಯೆ 2003 ಹೆಚ್ಚಳವಾಗಿದ್ದು, ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.

      ದೇಶದಲ್ಲಿ ಮಂಗಳವಾರ ಹೊಸದಾಗಿ 10,974 ಜನರಿಗೆ ಕೊರೊನಾ ವೈರಸ್‌ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2003 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

      3.5 ಲಕ್ಷ ಕೇಸ್‌ಗಳ ಪೈಕಿ ದೇಶದಲ್ಲಿ 1,86,935 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,55,227 ಜನರು ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap