ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 279 ಮಂದಿ ಬಲಿ!!

ನವದೆಹಲಿ :

     ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 331 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

       ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,985 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 331 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. 

      ಇದುವರೆಗೂ 2,76,583 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಈ ಪೈಕಿ 1,35,206 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

     ಜಗತ್ತಿನಲ್ಲಿ ಅತಿ ಹೆಚ್ಚು ಸೋಂಕು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಆರನೇ ಸ್ಥಾನದಲ್ಲಿದೆ. ಬಹುಶಃ ಭಾರತದ ಅಂಕಿ ಅಂಶ ಗಮನಿಸಿದ ಇನ್ನೆರಡು ದಿನಗಳಲ್ಲಿ ಯುಕೆ ಮತ್ತು ಸ್ಪೇನ್ ದೇಶಗಳನ್ನು ಹಿಂದಿಕ್ಕಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap