ನವದೆಹಲಿ :
ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,458 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 386 ಮಂದಿ ಮೃತಪಟ್ಟಿದ್ದಾರೆ.
ಹೌದು., ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ದೇಶದಲ್ಲಿ ಇದುವರೆಗೆ 3,08,993 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 1,54,330 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ಕಳೆದ 24 ಗಂಟೆಯಲ್ಲಿ ದೇಶದಲ್ಲಿ 386 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಸಾವಿನ ಸಂಖ್ಯೆ 8,884 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ದೆಹಲಿ, ತಮಿಳುನಾಡು ಮತ್ತು ಗುಜರಾತ್ ನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿದೆ. 15 ದಿನಗಳ ಹಿಂದೆ ಹತ್ತನೇ ಸ್ಥಾನದಲ್ಲಿದ್ದ ಭಾರತ ಸದ್ಯ 4 ನೇ ಸ್ಥಾನದಲ್ಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ