ಭಾರತದಲ್ಲಿ ಒಂದೇ ದಿನ 54,044 ಮಂದಿಗೆ ಸೋಂಕು ದೃಢ!!

ನವದೆಹಲಿ : 

    ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 54.044 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಭಾರತದಲ್ಲಿ ನಿನ್ನೆ ಒಂದೇ ದಿನ 717 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,15,197 ಕ್ಕೆ ಏರಿಕೆಯಾಗಿದೆ.

      ಒಟ್ಟು 76,51,108 ಸೋಂಕಿತರ ಪೈಕಿ 67,33,328 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 7,40,090 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap