ಭಾರತದಲ್ಲಿ ಒಂದೇ ದಿನ 67,151 ಮಂದಿಗೆ ಕೊರೊನಾ!!

ನವದೆಹಲಿ :

     ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 67,151 ಮಂದಿಗೆ ಸೋಂಕು ತಗುಲಿದ್ದು, 1,059 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

      ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ದೇಶದಲ್ಲಿ ನಿನ್ನೆ ಒಂದೇ ದಿನ 67,151 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 31,67,324 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಸದ್ಯ 7,07,267 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 24,67,759 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

     ಇನ್ನು ದೇಶದಲ್ಲಿ ನಿನ್ನೆ ಒಂದೇ ದಿನ 1,059 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 59,449 ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ