ನವದೆಹಲಿ:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 82,170 ಹೊಸ ಕೋವಿಡ್-19 ಕೇಸ್ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿ ದಾಟಿದೆ.
ದೇಶದಲ್ಲಿ ಒಂದೇ ದಿನ 1,039 ಮಂದಿ ಸಾವನ್ನಪ್ಪಿದ್ದು, ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 95,542ಕ್ಕೆ ಬಂದು ನಿಂತಿದೆ. ಈ ಮೂಲಕ ದೇಶದಲ್ಲಿ 60,74,703 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
India's #COVID19 tally crosses 60-lakh mark with a spike of 82,170 new cases & 1,039 deaths reported in the last 24 hours.
Case tally stands at 60,74,703 including 9,62,640 active cases, 5,01,6521 cured/discharged/migrated & 95,542 deaths: Ministry of Health & Family Welfare pic.twitter.com/pxCS5ar40u
— ANI (@ANI) September 28, 2020
ಒಟ್ಟು ಕೋವಿಡ್-19 ಪ್ರಕರಣಗಳಲ್ಲಿ ಈಗಾಗಲೇ 5,01,6521 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನುಳಿದಂತೆ 9,62,640 ಸಕ್ರಿಯ ಪ್ರಕರಣಗಳಿವೆ ಎಂದು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇನ್ನು ದೇಶದಲ್ಲಿ ಪ್ರತಿನಿತ್ಯ 90,000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗುತ್ತಿದ್ದು, ಸಕ್ರಿಯ ಪ್ರಕರಣಗಳಿಗಿಂತಲೂ ಚೇತರಿಕೆ ಪ್ರಮಾಣ 5 ಪಟ್ಟು ಹೆಚ್ಚಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ