ದೇಶದಲ್ಲಿ 60 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ!!

ನವದೆಹಲಿ: 

    ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 82,170 ಹೊಸ ಕೋವಿಡ್-19 ಕೇಸ್​ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿ ದಾಟಿದೆ.

      ದೇಶದಲ್ಲಿ ಒಂದೇ ದಿನ 1,039 ಮಂದಿ ಸಾವನ್ನಪ್ಪಿದ್ದು, ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 95,542ಕ್ಕೆ ಬಂದು ನಿಂತಿದೆ.  ಈ ಮೂಲಕ ದೇಶದಲ್ಲಿ 60,74,703 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

     ಒಟ್ಟು ಕೋವಿಡ್-19 ಪ್ರಕರಣಗಳಲ್ಲಿ ಈಗಾಗಲೇ 5,01,6521 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನುಳಿದಂತೆ 9,62,640 ಸಕ್ರಿಯ ಪ್ರಕರಣಗಳಿವೆ ಎಂದು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

     ಇನ್ನು ದೇಶದಲ್ಲಿ ಪ್ರತಿನಿತ್ಯ 90,000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗುತ್ತಿದ್ದು, ಸಕ್ರಿಯ ಪ್ರಕರಣಗಳಿಗಿಂತಲೂ ಚೇತರಿಕೆ ಪ್ರಮಾಣ 5 ಪಟ್ಟು ಹೆಚ್ಚಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link