ನವದೆಹಲಿ :
ದೇಶಾದ್ಯಂತ ಮಾರಕ ಕೊರೊನಾ ಸೋಂಕು ಜನತೆಯನ್ನು ತಲ್ಲಣಗೊಳಿಸಿದ್ದು, ನೋಡು ನೋಡುತ್ತಿದ್ದಂತೆ ಕೊರೊನಾ ಸೋಂಕಿತರ ಸಂಖ್ಯೆ 4000 ಗಡಿದಾಟಿದೆ.
ಹೌದು, ದೇಶದಲ್ಲಿ ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಮುಂಜಾಗ್ರತೆ ವಹಿಸಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪಾಟಿಸಿವ್ ಬಂದಿದ್ದು ಆತಂಕ ಹೆಚ್ಚಿಸಿದೆ.
Increase of 490 #COVID19 cases in the last 12 hours, India's positive cases cross 4000 mark – at 4067 (including 3666 active cases, 292 cured/discharged/migrated people and 109 deaths): Ministry of Health and Family Welfare pic.twitter.com/d5xHg53Y3M
— ANI (@ANI) April 6, 2020
ಈ ಕುರಿತು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 12 ಗಂಟೆಗಳ ಅವಧಿಯಲ್ಲಿ 490 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದೆ.
ಇನ್ನು ದೇಶದಲ್ಲಿ ಒಟ್ಟು ಸೋಂಕು ಪೀಡಿತರ ಸಂಖ್ಯೆ 4067ಕ್ಕೆ ಏರಿಕೆಯಾಗಿದ್ದು, ಈ 3666 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರಾನಾ ಸೋಂಕು ಪೀಡಿತರಾಗಿದ್ದ 109 ಮಂದಿ ಮೃತಪಟ್ಟಿದ್ದು, 292 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ಸ್ಪಷ್ಟಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ