ನವದೆಹಲಿ :
ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 76 ,472 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ.
ನಿನ್ನೆ ಒಂದೇ ದಿನ 76,472 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,63,973ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಕೊರೋನಾಗೆ ೧021 ಮಂದಿ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 62,550ಕ್ಕೆ ಏರಿಕೆಯಾಗಿದೆ. ಈ ನಡುವೆ 34,63,973 ಮಂದಿ ಸೋಂಕಿತರ ಪೈಕಿ 26,48,999 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ 7,52,424 ಸಕ್ರಿಯ ಪ್ರಕರಣಗಳಿವೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ