ನವದೆಹಲಿ :
ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ, ಅತಿ ಹೆಚ್ಚು ಅಂದರೆ 24,879 ಹೊಸ ಪ್ರಕರಣಗಳು ದಾಖಲಾಗಿವೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ ತಲುಪಿದೆ . ನಿನ್ನೆ ಒಂದೇ ದಿನ ಅತಿ ಹೆಚ್ಚು ಅಂದರೆ 24,879 ಹೊಸ ಪ್ರಕರಣಗಳು ದಾಖಲಾಗಿವೆ. ಮತ್ತು 487 ಜನರು ಸಾವನ್ನಪ್ಪಿದ್ದಾರೆ.
India reports the highest single-day spike of 24879 new #COVID19 cases and 487 deaths in the last 24 hours. Positive cases stand at 767296 including 269789 active cases, 476378 cured/discharged/migrated & 21129 deaths: Ministry of Health & Family Welfare pic.twitter.com/ZJJTLE1hVZ
— ANI (@ANI) July 9, 2020
ಗುರುವಾರದ ವೇಳೆಗೆ, ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 7,67,296 ಕ್ಕೆ ಮತ್ತು ಸಾವಿನ ಸಂಖ್ಯೆ 21,129 ಕ್ಕೆ ಏರಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 4,76,378 ಜನ ಮಾತ್ರ. ದೇಶದಲ್ಲಿ ಇನ್ನೂ 2,69,789 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ