ಎಸ್‌ಸಿ ಎಸ್‌ಟಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಇಲ್ಲ : ಸುಪ್ರೀಂ!

ದೆಹಲಿ: 

      ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಆದೇಶ ನೀಡಿದೆ.

      ಇಂದು(ಬುಧವಾರ) ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್‌ನ ಐವರು ಸದಸ್ಯರ ಸಂವಿಧಾನಿಕ ಪೀಠ, ಸುಪ್ರೀಂ 2006 ರಲ್ಲಿಯೇ ಎಸ್‌ಸಿ/ಎಸ್‌ಟಿ ಬಡ್ತಿ ಕುರಿತು ತೀರ್ಪು ನೀಡಿದ್ದು, ಅದನ್ನು ಮತ್ತೆ ಪುನರ್ ಪರಿಶೀಲಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

      ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ್ದ ಅರ್ಟಾನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ಈ ಸಮುದಾಯಗಳು ಹಿಂದುಳಿದಿವೆ ನಿಜ. ಆದರೆ, ಪ್ರಾತಿನಿಧ್ಯದ ಕೊರತೆ ಇದೆ ಎಂಬುದನ್ನು ಸಾಬೀತು ಮಾಡಲು ಬೇಕಾದ ದತ್ತಾಂಶ ಸಂಗ್ರಹಿಸುವುದು ಅಸಾಧ್ಯ ಎಂದು ಹೇಳಿದ್ದರು.

      ಹಿಂದುಳಿದವರು ಎಂದು ಹೇಳಲು ಮಾಹಿತಿ ಸಂಗ್ರಹ ಅಗತ್ಯವಿಲ್ಲ ಎಂದು ಸುಪ್ರೀಂ ಹೇಳಿದ್ದು, ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪಿನಿಂದಾಗಿ ಕೇಂದ್ರ ಸರ್ಕಾರ ನಿರಾಳವಾಗಿದೆ. ಎಸ್‌ಸಿ ಎಸ್‌ಟಿ ನೌಕರರ ಮುಂಬಡ್ತಿ ಕುರಿತು ಎಂ ನಾಗರಾಜ್ ಪ್ರಕರಣದ ಮರು ಪರಿಶೀಲನೆ ಅಗತ್ಯವಿಲ್ಲ ಎಂದು ನ್ಯಾ. ನಾರಿಮನ್ ಸ್ಪಷ್ಟಪಡಿಸಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ