ಆಯುಷ್ಮಾನ್ ಭಾರತ್ ಯೋಜನೆಗೆ ಮೋದಿಯಿಂದ ಚಾಲನೆ

ರಾಂಚಿ:

      ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಯುಷ್ಮಾನ್ ಭಾರತ್ ಗೆ ಭಾನುವಾರ(ಸೆಪ್ಟೆಂಬರ್ 23) ಮಧ್ಯಾಹ್ನ ಚಾಲನೆ ನೀಡಿದರು.

ಅಮೆರಿಕಾದ ‘ಒಬಾಮಾ ಕೇರ್’ ರೀತಿಯಲ್ಲಿ ಭಾರತದಲ್ಲಿ ‘ಮೋದಿಕೇರ್’.! : ಏನಿದು..?

     ಆಗಸ್ಟ್ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಈ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಇಂದು ಫಲಾನುಭವಿಗಳಿಗೆ ಗುರುತಿನ ಪ್ರಮಾಣ ಪತ್ರ ನೀಡುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(PMJAY) ಮೂಲಕ ವಾರ್ಷಿಕವಾಗಿ ಫಲಾನುಭವಿ ಕುಟುಂಬಕ್ಕೆ 5 ಲಕ್ಷ ರು ತನಕ ಸಿಗಲಿದೆ. ಸುಮಾರು 10 ಕೋಟಿ ಬಡ ಕುಟುಂಬಗಳಿಗೆ ಇದರಿಂದ ನೆರವಾಗಲಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗಲಿದೆ. 

      ‘ಪ್ರಧಾನ್ ಮಂತ್ರಿ ಆರೋಗ್ಯ ಯೋಜನೆ’ ಎಂದೂ ಕರೆಯುವ ಈ ಯೋಜನೆಯಿಂದ ದೇಶದ 50 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link