ದೇಶದಲ್ಲಿ ಒಂದೇದಿನ 86 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣ!!

ನವದೆಹಲಿ : 

      ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,432 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಕರೋನವೈರಸ್ ಪ್ರಕರಣಗಳ ಸಂಖ್ಯೆ ಶನಿವಾರ 40 ಲಕ್ಷ ದಾಟಿದೆ. 

     ಭಾರತದಲ್ಲಿ ಕೊರೊನಾವೈರಸ್ ಪ್ರಕರಣವು ಈಗ 40,23,179 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

     ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 31,07,223 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 70,000 ಕ್ಕೂ ಹೆಚ್ಚು ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೇತರಿಕೆ ಪ್ರಮಾಣ ಶೇಕಡಾ 77.15 ಕ್ಕೆ ಏರಿಕೆಯಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಕರೋನವೈರಸ್ ಕಾರಣ 1089 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 69,561 ಕ್ಕೆ ತಲುಪಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link