ಲೇಹ್:
ಗಡಿಯಲ್ಲಿ ಚೀನಾ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಭಾರತ ಮತ್ತು ಚೀನಾ ಸೇನೆಯ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ.
ಜಮ್ಮು ಮತ್ತು ಕಾಶ್ಮೀರದ ಲಡಾಕ್ನಲ್ಲಿರುವ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ಮುಖಾಮುಖಿಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಉಭಯ ಸೇನೆಗಳು ಹೆಚ್ಚುವರಿ ಸೈನಿಕರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದು, ಸಂಜೆ ವೇಳೆ ಭಾರತ ಮತ್ತು ಚೀನಾ ಸೇನೆಯ ಅಧಿಕಾರಿಗಳು ಸಭೆ ನಡೆಸಿ, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಪ್ಯಾಂಗಾಂಗ್ ಸರೋವರದ ಬಳಿ ಈ ಹಿಂದೆಯೂ ಹಲವು ಬಾರಿ ಭಾರತ ಮತ್ತು ಚೀನಾ ಸೈನಿಕರು ಮುಖಾಮುಖಿಯಾಗಿದ್ದರು. 2017ರ ಆಗಸ್ಟ್ 15ರಂದು ಚೀನಾ ಸೇನೆ ಭಾರತದ ಗಡಿಯೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿತ್ತು. ಈ ವೇಳೆ ಭಾರತೀಯ ಸೇನೆ ಚೀನಾ ಸೈನಿಕರನ್ನು ತಡೆದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
