ಇಸ್ಲಾಮಾಬಾದ್:
ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯ ಯೋಧನೊಬ್ಬ ಮೃತಪಟ್ಟಿದ್ದಾನೆ ಎಂದು ಪಾಕ್ ಸೇನೆ ತಿಳಿಸಿದೆ.
ಗಡಿ ನಿಯಂತ್ರಣ ರೇಖೆ ಬರೋಹ ಮತ್ತು ಚಿರಿಕ್ಟ್ ಬಳಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಈ ದಾಳಿಯಲ್ಲಿ ಪಾಕ್ ಸೈನಿಕ ಮೃತಪಟ್ಟಿದ್ದು ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ ಎಂದು ಪಾಕ್ ಸೇನೆಯ ಮಾಧ್ಯಮ ವಿಭಾಗ ಅಂತರ ಸೇವೆಗಳು ಸಾರ್ವಜನಿಕ ಸಂಪರ್ಕ(ಐಎಸ್ಪಿಆರ್) ಹೇಳಿದೆ.
ಭಾರತೀಯ ಸೇನೆಯ ದಾಳಿಗೆ ಪ್ರತಿಯಾಗಿ ಪಾಕ್ ಸಹ ಪ್ರತ್ಯುತ್ತರ ನೀಡುತ್ತಿದ್ದು ಭಾರತದ ಕಡೆಯೂ ಸಾವು ನೋವು ಸಂಭವಿಸಿರುವ ಮಾಹಿತಿ ಇರುವುದಾಗಿ ಪಾಕ್ ಹೇಳಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
