ನವದೆಹಲಿ:
ಕಳೆದ 24 ಗಂಟೆಯಲ್ಲಿ ದಾಖಲಾದ 75,760 ಕೊರೊನಾ ಸೋಂಕು ಪ್ರಕರಣಗಳೊಂದಿಗೆ ಗುರುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 75,760 ಮಂದಿಗೆ ಸೋಂಕು ದೃಢಪಟ್ಟಿದ್ದು, 1023 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 60,472ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 33,10,235ಕ್ಕೆ ಏರಿಕೆಯಾಗಿದ್ದು, 25,23,772 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 60,472 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 7,25,991 ಸಕ್ರಿಯ ಪ್ರಕರಣಗಳು ಇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
