ದೇಶದಲ್ಲಿ ಒಂದೇ ದಿನ 74,442 ಕೊರೊನಾ ಕೇಸ್ ಪತ್ತೆ!!

ನವದೆಹಲಿ:

    ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

     ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 66,23,816 ಕ್ಕೆ ಏರಿಕೆಯಾಗಿದೆ.

     ಪ್ರಸ್ತುತ ದೇಶದಲ್ಲಿ ಒಟ್ಟು 9,34,427 ಸಕ್ರಿಯ ಪ್ರಕರಣಗಳಿದ್ದು, ದೇಶಾದ್ಯಂತ ಈ ವರೆಗೂ ಚೇತರಿಸಿಕೊಂಡ ಸೋಂಕಿತರ ಸಂಖ್ಯೆ 55,86,704ಕ್ಕೆ ಏರಿಕೆಯಾಗಿದೆ.

     ಅಂತೆಯೇ ಒಂದೇ ದಿನ 903 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,02,685ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap