ದೇಶದಲ್ಲಿ 80 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ!

ನವದೆಹಲಿ : 

     ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80 ಲಕ್ಷ ಗಡಿ ದಾಟಿದೆ.

      ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ಆರು ವಾರಗಳಿಂದ ಹೊಸ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಸದ್ಯ 6 ಲಕ್ಷ ಕೇಸ್​ಗಳು ಮಾತ್ರ ಸಕ್ರಿಯವಾಗಿವೆ. ಕೊರೊನಾ ಸೋಂಕಿತರ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ.

     ಕಳೆದ 24 ಗಂಟೆಯಲ್ಲಿ 517 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,20,527ಕ್ಕೆ ಏರಿಕೆಯಾಗಿದೆ.

      ಇನ್ನು ದೇಶದಲ್ಲಿ 6,03,687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 56,480 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 73,15,989 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap