ಅಯೋಧ್ಯೆ :
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಭಾರತ ಮತ್ತು ಚೀನಾ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಿರ್ಮಾಣ ಕಾರ್ಯ ಸ್ಥಗಿತದ ಕುರಿತಂತೆ ರಾಮಮಂದಿರ ಟ್ರಸ್ಟ್ ಮಾಹಿತಿ ನೀಡಿದೆ. ‘ದೇಶದ ರಕ್ಷಣೆ ಬಹಳ ಮುಖ್ಯ. ಪರಿಸ್ಥಿತಿ ಬಹಳ ಗಂಭೀರವಾಗಿದೆ. ರಾಮ ಮಂದಿರ ನಿರ್ಮಾಣ ಯೋಜನೆ ಈಗ ಆರಂಭಿಸುವುದು ಸೂಕ್ತವಲ್ಲ, ಸದ್ಯಕ್ಕೆ ರಾಮಮಂದಿರ ನಿರ್ಮಾಣ ಯೋಜನೆ ಇಲ್ಲ’ ‘ರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭದ ಬಗ್ಗೆ ದೇಶದ ಪರಿಸ್ಥಿತಿ ಅನುಗುಣವಾಗಿ ತೆಗೆದುಕೊಳ್ಳಲಾಗುವುದು ಮತ್ತು ಅಧಿಕೃತವಾಗಿ ಘೋಷಣೆ ಮಾಡಲಾಗುವುದು’ ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ.
ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಘರ್ಷಣೆ ಸಂಭವಿಸಿದ್ದು, ಈ ಘಟನೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಮಮಂದಿರ ಕಾರ್ಯ ಸೂಕ್ತವಲ್ಲ. ಮಂದಿರ ನಿರ್ಮಾಣ ಆರಂಭಿಸುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
