ಬೆಂಗಳೂರು:
ಸ್ಯಾಂಡಲ್ ವುಡ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಸ್ಯಾಂಡಲ್‌ವುಡ್ ಮಾದಕ ಜಾಲದ ನಂಟು ಹೊಂದಿರುವ ಬಗ್ಗೆ ಮಾಹಿತಿ ದಟ್ಟವಾದ ಹಿನ್ನೆಲೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಳ್ಳುವಂತೆ ಇಂದ್ರಜಿತ್ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಇತ್ತೀಚೆಗೆ ಎನ್ ಸಿಬಿ ಸಿಲಿಕಾನ್ ಸಿಟಿಯಲ್ಲಿ 2ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸಿತ್ತು.
ಈ ಪ್ರಕರಣದ ಕಿಂಗ್ ಪಿನ್ ಅನಿಕಾ, ಕೆಲ ನಟ – ನಟಿಯರು ಹಾಗೂ ಸಂಗೀತ ನಿರ್ದೇಶಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಳು.
ಈ ಸುದ್ದಿ ಬಹಿರಂಗಗೊಳ್ಳುತ್ತಿದ್ದಂತೆ ಇಂದ್ರಜಿತ್ ಲಂಕೇಶ್ ಅವರು, ‘ಸ್ಯಾಂಡಲ್‌ವುಡ್‌ನ ಹಲವರು ಡ್ರಗ್ಸ್ ಮಾರಾಟದಿಂದಲೇ ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದು ರಾಜಾರೋಷವಾಗಿ ಹೇಳಿಕೆ ನೀಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು, ಡ್ರಗ್ಸ್ ದಂಧೆ ಬಗ್ಗೆ ತನಿಖೆ ಆರಂಭಿಸಿದ್ದು, ಖಚಿತ ಮಾಹಿತಿ ನೀಡುವಂತೆ ಕೋರಿ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ