ದೆಹಲಿ :
ರೈತರ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಮೊಳಗುತ್ತಿದ್ದು, ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ದೆಹಲಿಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು., ಇಂದು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿದ್ದಾರೆ.
ಪ್ರತಿಭಟನೆ, ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೆಂಪು ಕೋಟೆಗೆ ಮುತ್ತಿಗೆ ಹಾಕಿರುವಂತ ರೈತರು, ರಾಷ್ಟ್ರದ ರಾಜಧಾನಿಯಲ್ಲಿ ತಮ್ಮ ಕಿಚ್ಚನ್ನು ಮೊಳಗಿಸಿದ್ದಾರೆ.
ಇದೇ ಸಂದರ್ಭದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿರುವಂತ ಸಿಂಘು ಗಡಿ, ಗಾಜೀಪುರ ಗಡಿ, ತಿಕ್ರಿ ಗಡಿ, ಮುಕ್ರಬಾ ಚೌಕ್ ಹಾಗೂ ನಂಗೋಲಿ ಸೇರಿದಂತೆ ಅನೇಕ ಪ್ರದೇಶದಲ್ಲಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಮೇರೆಗೆ ರಾತ್ರಿ 12 ಗಂಟೆಯವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
