ನಿತ್ಯಾನಂದನ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ!!

ನವದೆಹಲಿ :

      ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ವಿರುದ್ಧ ಗುಜರಾತ್ ಪೊಲೀಸರ ಮನವಿ ಮೇರೆಗೆ  ಇಂಟರ್ಪೋಲ್ ‘ಬ್ಲೂ ಕಾರ್ನರ್ ನೋಟಿಸ್’ ಹೊರಡಿಸಿದೆ.

      ಸಾಮಾನ್ಯವಾಗಿ ಈ ಬ್ಲೂ ಕಾರ್ನರ್ ನೋಟಿಸ್ ಅನ್ನು ನಾಪತ್ತೆಯಾದ, ಗುರುತು ಪತ್ತೆಯಾದ ಅಥವಾ ಪತ್ತೆಯಾಗದ ಅಪರಾಧಿಗಳು ಮತ್ತು ಸಾಮಾನ್ಯ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿರುವ ಅಪರಾಧಿಗಳ ವಿರುದ್ಧ ಹೊರಡಿಸಲಾಗುತ್ತದೆ.

       ಗುಜರಾತ್​ನ ಅಹಮದಾಬಾದ್​ ನಲ್ಲಿರುವ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದಲ್ಲಿನ ನಾಲ್ಕು ವಿದ್ಯಾರ್ಥಿಗಳ ಅಪಹರಣ ಹಾಗೂ ಅವರನ್ನು ಆಶ್ರಮಕ್ಕೆ ದೇಣಿಗೆ ಸಂಗ್ರಹಿಸಲು ಬಳಸಿಕೊಂಡ ಆರೋಪದ ಮೇಲೆ ನಿತ್ಯಾನಂದ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇದೇ ವಿಚಾರವಾಗಿ ಗುಜರಾತ್ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದ್ದರು ಅದರಂತೆ ಈಗ ‘ಬ್ಲೂ ಕಾರ್ನರ್ ನೋಟಿಸ್’ ಹೊರಡಿಸಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap