ನವದೆಹಲಿ:
ಜಾರಿ ನಿರ್ದೇಶನಾಲಯದ ಬಂಧನದಿಂದ ವಿನಾಯಿತಿ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಪೀಠ, ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ, ಆರ್ಥಿಕ ಅಪರಾಧಗಳಲ್ಲಿ ನಿರೀಕ್ಷಣಾ ಜಾಮೀನಗಳನ್ನು ವಿವೇಚನೆಯಿಂದ ನೀಡಬೇಕಾಗುತ್ತದೆ ಎಂದು ತಿಳಿಸಿದೆ.
ಪಿ.ಚಿದಂಬರಂ ಅವರು ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ