ಪುಲ್ವಾಮ:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ಕೈಗೊಂಡಿರುವ ಭಾರತೀಯ ಸೇನೆ ಅವಂತಿಪೋರಾ ಬಳಿ ಉಗ್ರನನ್ನು ಹತ್ಯೆ ಮಾಡಿದೆ.
ಅವಂತಿಪೋರಾದ ಹೊರವಲಯದಲ್ಲಿ ಉಗ್ರ ಅಡಗಿಕುಳಿತಿರುವ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನೆ, ಎನ್’ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.
ನಂತರ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ