ಶ್ರೀನಗರ:
ಜಮ್ಮು-ಕಾಶ್ಮೀರದಲ್ಲಿ ಇಂದು ನಡೆದಿರುವ ಎನ್ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.
ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಸುಮಾರು 2:30ರಿಂದ ಆರಂಭಿಸಿತ್ತು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಶೋಧ ಕಾರ್ಯಾಚರಣೆಯು ಎನ್ಕೌಂಟರ್ ಆಗಿ ಬದಲಾಯಿತು.
ಈ ಎನ್ಕೌಂಟರ್ ಅಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಕಾರ್ಯಚರಣೆ ವೇಳೆ ಓರ್ವ ಮಹಿಳೆ ಕೂಡ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅಧಿಕಾರಿಯು ಸೇರಿದಂತೆ ಸಿಆರ್ಪಿಎಫ್ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉಗ್ರರ ವಿರುದ್ದ ಕಾರ್ಯಾಚರಣೆಯು ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ