ಶ್ರೀನಗರ :
ಬಸ್‌ವೊಂದು ಆಳವಾದ ಕಂದರಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯರು ಸೇರಿದಂತೆ 6 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಇತರ 35 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಉಧಾಂಪುರದ ಮಜಲ್ಟಾ ಪ್ರದೇಶದ ಚಾನೆರ್ ಸಮೀಪ ನಿನ್ನೆ ಶುಕ್ರವಾರ ಮಧ್ಯರಾತ್ರಿ 12:30ರ ಸುಮಾರಿಗೆ ಶ್ರೀನಗರಕ್ಕೆ ತೆರಳುತ್ತಿದ್ದ ಬಸ್ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಘಟನೆಯಿಂದ ”ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 35 ಜನರು ಗಾಯಗೊಂಡಿದ್ದಾರೆ” ಎಂದು ಉಧಂಪುರ ಎಸ್‌ಎಸ್‌ಎಸ್ಪಿ ರಾಜೀವ್ ಪಾಂಡೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಘಟನೆ ನಡೆದ ತಕ್ಷಣವೇ ಕಂದಾಯ, ನಾಗರಿಕ ರಕ್ಷಣೆ ಹಾಗೂ ಪೊಲೀಸರ ತಂಡ ಸ್ಥಳಕ್ಕೆ ತಲುಪಿದ್ದು, ದುರಂತ ನಡೆದ ತಾಣದಲ್ಲೀಗ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ