ಶ್ರೀನಗರ:
ಕಾಶ್ಮೀರ ಕಣಿವೆಯಲ್ಲಿ ಸುರಿಯುತ್ತಿರುವ ಹಿಮಪಾತಕ್ಕೆ ಇದೀಗ ಸೇನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಇಬ್ಬರು ಸೇರಿ ನಾಲ್ವರು ಬಲಿಯಾಗಿದ್ದಾರೆ.
ಕುಪ್ವಾರ ಜಿಲ್ಲೆಯ ಸೇನಾ ನೆಲೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಮತ್ತೊಂದು ದುರಂತದಲ್ಲಿ ವಿದ್ಯುತ್ ಸರಬರಾಜು ಪುನಸ್ಥಾಪಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಪಿಡಿಡಿ ಸಿಬಂದಿ ಮೃತಪಟ್ಟಿದ್ದಾರೆ.
ಜಮ್ಮು ಕಾಶ್ಮೀರ, ಮನಾಲಿ, ಉತ್ತರಾಖಾಂಡ್ , ಹಿಮಾಚಲ ಪ್ರದೇಶ ಸೇರಿ ಹಲವೆಡೆ ನಿನ್ನೆಯಿಂದ ಮಂಜಿನ ಮಳೆಯಾಗುತ್ತಿದ್ದು, ಹಲವೆಡೆ ಹಿಮಪಾತವಾಗಿ, ಜನರು ಸಮಸ್ಯೆ ಸಿಲುಕಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ